ನಮಸ್ಕಾರ ಸ್ನೇಹಿತರೇ,ನೀವು ಕಲಬುರಗಿ ಜಿಲ್ಲೆಯವರಾಗಿದ್ದು ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗಿದ್ದರೆ ನಿಮಗಾಗಿ ಒಂದು ಉತ್ತಮ ಅವಕಾಶ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಕಲಬುರಗಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಒಟ್ಟು 412 ಸ್ಥಾನಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ವಿಶೇಷವೆಂದರೆ, ಈ ಉದ್ಯೋಗಕ್ಕೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಹೇಗೆ ಬಳಸಿಕೊಳ್ಳಬೇಕು? ಅರ್ಹತೆಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ: ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಬುರ್ಗಿ (WCD Kalaburagi) ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಉದ್ಯೋಗ ಸ್ಥಳ: ಕಲ್ಬುರ್ಗಿ- ಕರ್ನಾಟಕ ಒಟ್ಟು ಹುದ್ದೆಗಳು: 412 ವಿದ್ಯಾರ್ಹತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷವಾಗಿರಬೇಕು ಹಾಗೂ ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಿರಬಾರದು. ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆಯ್ಕೆ ವಿಧಾನ: ಮೆರಿಟ್ ಪಟ್ಟಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ? ಹಂತ 1: ಮೊದಲಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಹಂತ 2: ಅರ್ಜಿ ಸಲ್ಲಿಸಲು ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಿ. ಹಂತ 3: ಗುರುತಿನ ಚೀಟಿ (ಆಧಾರ್ ಕಾರ್ಡ್), ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ಅಂಕಪಟ್ಟಿಗಳು ಹಾಗೂ ಇತ್ತೀಚಿನ ಫೋಟೋವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಬೇಕು. ಹಂತ 4: ಆನ್ಲೈನ್ ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಹಂತ 5: ಕೊನೆಯದಾಗಿ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆಯನ್ನು ಸಂರಕ್ಷಿಸಿಕೊಳ್ಳಿ. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 20 -02- 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 -03- 2026 Post navigation ಫೆಡರಲ್ ಬ್ಯಾಂಕ್ ನೇಮಕಾತಿ | Federal Bank Recruitment 2026 Shram Yogi Mandan ಯೋಜನೆ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ