ನಮಸ್ಕಾರ ಸ್ನೇಹಿತರೇ, ನೀವು ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಕೇಂದ್ರ ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಆರಂಭಿಸಲು ಆಸಕ್ತರಾಗಿದ್ದೀರಾ? ಹಾಗಿದ್ದರೆ ನಿಮ್ಮ ಕನಸು ಸಾಕಾರಗೊಳ್ಳುವ ಅವಕಾಶ ಬಂದಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2026ರ ಭಾರತೀಯ ಆರ್ಥಿಕ ಸೇವೆ (IES) ಹಾಗೂ ಸಂಖ್ಯಾಶಾಸ್ತ್ರ ಸೇವೆ (ISS) ಪರೀಕ್ಷೆಗಳಿಗಾಗಿ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

ಹುದ್ದೆಗಳ ಮಾಹಿತಿ:

  • ಸಂಸ್ಥೆಯ ಹೆಸರು: ಕೇಂದ್ರ ಲೋಕಸೇವಾ ಆಯೋಗ (Union Public Service Commission)
  • ಹುದ್ದೆಯ ಹೆಸರು: ಭಾರತೀಯ ಆರ್ಥಿಕ ಸೇವೆ (IES) ಮತ್ತು ಸಂಖ್ಯಾಶಾಸ್ತ್ರೀಯ ಸೇವೆ (ISS) ಪರೀಕ್ಷೆ
  • ಒಟ್ಟು ಹುದ್ದೆಗಳು: 44
  • ಉದ್ಯೋಗ ಸ್ಥಳ: ಅಖಿಲ ಭಾರತ

ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಮಾಸಿಕ ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದ ನಿಯಮಗಳ ಪ್ರಕಾರ ವೇತನ ಮತ್ತು ಇತರೆ ಭತ್ಯೆಗಳು ನೀಡಲಾಗುತ್ತದೆ.

ವಯೋಮಿತಿ:

  • ಕನಿಷ್ಠ ವಯಸ್ಸು: 21 ವರ್ಷಗಳು.
  • ಗರಿಷ್ಠ ವಯಸ್ಸು: 30 ವರ್ಷಗಳು

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕದ ವಿವರ:

  • ಮಹಿಳೆಯರು/ಎಸ್‌ಟಿ/ಎಸ್‌ಸಿ/ಮಾಜಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಇಲ್ಲ
  • ಎಲ್ಲಾ ಇತರ ಅಭ್ಯರ್ಥಿಗಳಿಗೆ– ₹200/-
  • ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ ಹೇಗೆ?

  • ಲಿಖಿತ ಪರೀಕ್ಷೆ
  • ವೈವಾ ವೋಸ್

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲಿಗೆ Union Public Service Commission (UPSC) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಪ್ರಕಟಣೆಯನ್ನು ಸಂಪೂರ್ಣವಾಗಿ ಓದಿ, ನಿಮ್ಮ ಅರ್ಹತೆಗಳನ್ನು ಪರಿಶೀಲಿಸಿ ದೃಢಪಡಿಸಿಕೊಳ್ಳಿ.
  3. ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯ ದಾಖಲೆಗಳು (ಗುರುತಿನ ಚೀಟಿ, ಶೈಕ್ಷಣಿಕ ಪ್ರಮಾಣಪತ್ರಗಳು, ಫೋಟೋ) ಸಿದ್ಧವಾಗಿರಲಿ.
  4. ಆನ್‌ಲೈನ್ ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ನಮೂದಿಸಿ ಮತ್ತು ಸಂಬಂಧಿತ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  5. ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿಸಿ, ನಂತರ ‘Submit’ ಬಟನ್ ಒತ್ತಿ.
  6. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಪ್ರಿಂಟ್ ಅಥವಾ ಡೌನ್‌ಲೋಡ್ ಮಾಡಿಕೊಂಡು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-02-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-03-2026

Leave a Reply

Your email address will not be published. Required fields are marked *